ನಗರದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Update: 2016-12-11 18:11 GMT

ಮಂಗಳೂರು,ಡಿ.11 : ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಜಗದೀಶ್ ಶುಭ ಹಾರೈಸಿ ಚಾಲನೆ ನೀಡಿದರು.

ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವಾ ಆಳ್ವಾಸ್ ಸಾಂಸ್ಕೃತಿಕ ವೈಭವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕರಾದ ಜೆ.ಆರ್.ಲೋಬೊ,ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿ ಸೋಜ,ಕರ್ನಾಟಕ ಜಾನಪದ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಚಿನ್ನಪ್ಪ ಗೌಡ,  ಕರ್ನಾಟಕ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಅಮರ ಆಳ್ವಾ, ಎ.ಜೆ.ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ,  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎಂ.ಹನೀಫ್,  ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಆಸರೆ ಚ್ಯಾರಿಟೇಬಲ್ ಟ್ರಸ್ಟ್‌ನ ಡಾ.ಆಶಾಜ್ಯೋತಿ ರೈ,  ಮಾಜಿ ಮೂಡಾ ಅಧ್ಯಕ್ಷ ತೇಜೋಮಯ, ಶಕ್ತಿನಗರ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಯಕ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ,  ಲಯನ್ಸ್ ಎಂಜೆಎಫ್ ಕವಿತಾ ಶಾಸ್ತ್ರಿ ಮೊದಲಾದವರು ಉಪಸ್ಥಿತರಿದ್ದರು.

      

ನೃತ್ಯ ವೈಭವ:-ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಮಾರು 350 ವಿದ್ಯಾರ್ಥಿಗಳು ದೇಶ ವಿದೇಶದ ವಿವಿಧ ನೃತ್ಯ ಪ್ರಕಾರಗಳನ್ನು ನಗರದ ಬಂಟ್ಸ್ ಹಾಸ್ಟೆಲ್ ಸಭಾಂಗಣದ ಬಳಿಯ ಲ್ಲಿ ನಿರ್ಮಿಸಲಾದ ಬೃಹತ್ ಮೈದಾನದಲ್ಲಿ ಕೇರಳದ ಮೋಹಿನಿಯಾಟ್ಟಂ ನೃತ್ಯದೊಂದಿಗೆ ವರ್ಣ ರಂಜಿತ ಆರಂಭ ನೀಡಿದರು.ಬಳಿಕ ದೇಶ ವಿದೇಶದ ವೈವಿಧ್ಯಮಯ ಪ್ರದರ್ಶನ ಆಂಧ್ರದ ಬಂಜಾರ,ಮಣಿಪುರಿ,ಶ್ರೀಲಂಕಾ ಮೊದಲಾದ ದೇಶಗಳ ನೃತ್ಯ ಪ್ರದರ್ಶನದ ಮೂಲಕ ನೃತ್ಯ ವೈಭವ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News