×
Ad

ಉಡುಪಿ : ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮ

Update: 2016-12-13 19:56 IST

ಉಡುಪಿ, ಡಿ.13:  ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಉಡುಪಿ ರೋಟರಿ ಕ್ಲಬ್, ಪ್ರಾದೇಶಿಕ ಸಾರಿಗೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮವನ್ನು ಮಂಗಳವಾರ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

 ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ರೋಟರಿ ಅಧ್ಯಕ್ಷ ಡಾ.ಸುರೇಶ್ ಶೆಣೈ ಮಾತನಾಡಿ, ಇಂದು ನಮ್ಮ ರಸ್ತೆಯಲ್ಲಿ ಹೆಚ್ಚಿನ ವಾಹನ ಗಳು ಓಡಾಡುತ್ತಿವೆ. ಆದರೆ ನಾವು ಅದಕ್ಕೆ ತಯಾರಿ ಆಗಿಲ್ಲ. ಆದುದರಿಂದ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ವಿದೇಶದಲ್ಲಿರುವಾಗೆ ಇಲ್ಲಿಯೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಚಿತ್ರನಟಿ, ರಂಗಭೂಮಿ ಕಲಾವಿದೆ ದಿಶಾ ಮಂಡ್ಯ ರಮೇಶ್ ರಸ್ತೆ ಸುರಕ್ಷತೆಯ ಕುರಿತ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸಹಾಯಕ ಆರ್‌ಟಿಓ ರಾಮಕೃಷ್ಣ ರೈ ನರ್ಸಿಂಗ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಸಭಾಪತಿ ಡಾ.ಉಮೇಶ್ ಪ್ರಭು ಅಧ್ಯಕ್ಷತೆ ವಹಿಸಿದ್ದರು.

ಉಪಸಭಾಪತಿ ಡಾ.ಅಶೋಕ್ ಕುಮಾರ್ ವ್ಯೆ.ಜಿ. ಸ್ವಾಗತಿಸಿ ವಂದಿಸಿದರು.

ಡಾ.ಅರವಿಂದ ನಾಯಕ್ ಅಮ್ಮುಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೂನಿಯರ್ ರೆಡ್‌ಕ್ರಾಸ್ ಅಧ್ಯಕ್ಷ ಜಯರಾಮ ಆರ್ಚಾಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News