ಸುಳ್ಯ: ಕಾನೂನು ಸಾಕ್ಷರತಾ ರಥಕ್ಕೆ ಸ್ವಾಗತ
ಸುಳ್ಯ, ಡಿ. 13 :ಸಂಚಾರಿ ನ್ಯಾಯಾಲಯ ಹಾಗೂ ಕಾನೂನು ಅರಿವು-ನೆರವು ಮೂಡಿಸುವ ಕಾನೂನು ಸಾಕ್ಷರತಾ ರಥ ಸುಳ್ಯಕ್ಕೆ ಆಗಮಿಸಿದೆ.
ಸುಳ್ಯ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶ ಎಸ್.ಸರವಣನ್ ರಥಕ್ಕೆ ಚಾಲನೆ ನೀಡಿದರು.
ತಹಶೀಲ್ದಾರ್ ಎಂ.ಎಂ.ಗಣೇಶ್ ಉಪಸ್ಥಿತರಿದ್ದರು.
ಡಿಸೆಂಬರ್ 16ರವರೆಗೆ ತಾಲೂಕಿನ ವಿವಿಧೆಡೆ ಕಾನೂನು ರಥ ಸಂಚರಿಸಲಿದ್ದು, ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಲಿದೆ. ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಅಧಿವೇಶನದಲ್ಲಿ ಮಾತನಾಡಿದ ಸರವಣನ್, ಎಲ್ಲರೂ ಕಾನೂನಿನ ಅರಿವು ಹೊಂದುವುದು ಸಂವಿಧಾನದಲ್ಲಿಯೇ ಹೇಳಿದೆ. ಹಾಗಾಗಿ ಪ್ರತಿ ಆರು ತಿಂಗಳಿಗೊಮ್ಮ ಕಾನೂನು ರಥ ಆಗಮಿಸುತ್ತಿದ್ದು, ಈ ಸಂದರ್ಭ ವಿದ್ಯಾರ್ಥಿಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಅತಿಥಿಯಾಗಿದ್ದ ಎಸ್‌ಐ ಚಂದ್ರಶೇಖರ್ ಮಾತನಾಡಿ, ಕಾನೂನು ತಿಳಿಯದೇ ಅಪರಾಧ ಮಾಡಿದ್ದರೂ ಅದಕ್ಕೆ ಕ್ಷಮೆ ಇರುವುದಿಲ್ಲ. ಹಾಗಾಗಿ ಎಲ್ಲರೂ ಕಾನೂನು ತಿಳಿವಳಿಕೆ ಹೊಂದಿವದು ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಳಿನ್ ಕುಮಾರ್ ಕೋಡ್ತುಗುಳಿ ಅಧ್ಯಕ್ಷತೆ ವಹಿಸಿದ್ದರು.
ವಕೀಲರಾದ ಎಂ.ವೆಂಕಪ್ಪ ಗೌಡ, ಕೆ.ಲೋಲಾಕ್ಷಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಅತಿಥಿಗಳಾಗಿದ್ದರು. ಮೋಟಾರು ವಾಹನ ಕಾಯ್ದೆ ಕುರಿತು ಬಿ.ಎಸ್.ಶರೀಫ್, ಎಫ್‌ಐಆರ್ ಕುರಿತು ಕೆ.ನಾರಾಯಣ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎನ್.ಮಹಾಲಿಂಗ ಭಟ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ನಳಿನಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೋಯಪ್ಪ ಪೂಜಾರಿ ಉಪಸ್ಥಿತರಿದ್ದರು.
ಶ್ರೀಹರಿ ಕುಕ್ಕುಡೇಲು ಕಾರ್ಯಕ್ರಮ ನಿರೂಪಿಸಿದರು.