×
Ad

ಬೈಕ್ ಕಳವು ಪ್ರಕರಣ: ಆರೋಪಿ ಬಂಧನ

Update: 2016-12-13 21:43 IST

ಮಂಗಳೂರು, ಡಿ. 13: ನಗರದ ಪಂಪ್‌ವೆಲ್ ಬಳಿ 2010ರಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ನಿವಾಸಿ ಲತೀಫ್ ಎಂಬಾತನನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯವು ಈತನ ಮೇಲೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಆರೋಪಿಯು ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಈ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣಾ ಎಎಸ್‌ಐ ಶ್ರೀಧರ್ ಮತ್ತು ಎಚ್‌ಸಿ ಚಂದ್ರಶೇಖರ್ ಅವರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News