ರೊನಾಲ್ಡೊ 4ನೆ ಬಾರಿ ‘ಬ್ಯಾಲನ್ ಡಿ ಒರ್’!!
Update: 2016-12-13 23:41 IST
ಪೋರ್ಚುಗಲ್ ಹಾಗೂ ರಿಯಲ್ ಮ್ಯಾಡ್ರಿಡ್‌ನ ಸೂಪರ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಕನಸು ಮತ್ತೊಮ್ಮೆ ಈಡೇರಿದೆ. ಅವರು ತನ್ನ ಪ್ರತಿಸ್ಪರ್ಧಿ ಲಿಯೊನೆಲ್ ಮೆಸ್ಸಿ ಅವರನ್ನು ಹಿಂದಿಕ್ಕಿ ನಾಲ್ಕನೆ ಬಾರಿ ವಿಶ್ವದ ಶ್ರೇಷ್ಠ ಆಟಗಾರರಿಗೆ ನೀಡಲಾಗುವ ಪ್ರತಿಷ್ಠಿತ ‘ಬ್ಯಾಲನ್ ಡಿ’ಒರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.