ಡಿ.17-18 ರಂದು ಬಳಕುಂಜೆ ಸಂತ ಪೌಲರ ಶಾಲೆಯ ಶತಮಾನೋತ್ಸವ
ಮುಲ್ಕಿ, ಡಿ.14: ಕಿನ್ನಿಗೋಳಿ ಸಮೀಪದ ಬಳಕುಂಜೆ ಅನುದಾನಿತ ಸಂತ ಪೌಲರ ಹಿರಿಯ ಪ್ರಾಥಮಿಕ ಶಾಲೆಯ ‘ಶತಮಾನೋತ್ಸವ ಮಹಾ ಸಂಭ್ರಮ’ ಡಿಸೆಂಬರ್ 17 ಮತ್ತು18 ರಂದು ನಡೆಯಲಿದೆ.
17 ರಂದು ಶನಿವಾರ ಬೆಳಗ್ಗೆ 9:30ಕ್ಕೆ ದ್ವಜಾರೋಹಣ ನಡೆಯಲಿದ್ದು ಬಳಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪುತ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಬಳಕುಂಜೆ ಭಂಡಸಾಲೆ ಮನೆಯಿಂದ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ, ಸಂಜೆ 6 ಗಂಟೆಗೆ ಕೆಥೋಲಿಕ್ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಅ.ವಂ.ಡೇನಿಸ್ ಮೋರಾಸ್ ಪ್ರಭು ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
18ರಂದು ರವಿವಾರ ಸಂಜೆ 4 ಗಂಟೆಗೆ ಕೃತಜ್ಞತಾ ಬಲಿಪೂಜೆ, ಸಂಜೆ 6 ಗಂಟೆಗೆ ಕೆಥೊಲಿಕ್ ಶಿಕ್ಷಣ ಮಂಡಳಿ ಅಧ್ಯಕ್ಷ ಪರಮಪೂಜ್ಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅದ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಶಾಸಕ ಅಭಯಚಂದ್ರ ಜೈನ್, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಅಮರನಾಥ ಶೆಟ್ಟಿ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಆದಾನಿ ಗ್ರೂಪ್‌ನ ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಆಳ್ವ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ.ಎಮ್. ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳು ಮತ್ತು ಶತಮಾನೋತ್ಸವ ಸಮಿತಿ ಮುಂಬೈ ಪ್ರಾಯೋಜಕತ್ವದಲ್ಲಿ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.