×
Ad

ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ

Update: 2016-12-14 17:26 IST

ಮಂಗಳೂರು, ಡಿ.14: ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡಿ.31ರಿಂದ ಯಾವುದೇ ರೀತಿಯ ಪ್ಲಾಸ್ಟಿಕ್ ತಟ್ಟೆಗಳು, ಪ್ಲಾಸ್ಟಿಕ್ ಚಮಚಗಳು, ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಗ್ಲಾಸುಗಳು, ಪ್ಲಾಸ್ಟಿಕ್ ಬಾವುಟ, ಪ್ಲೆಕ್ಸ್, ಬ್ಯಾನರ್, ಥರ್ಮಕೋಲು ಪ್ಲೇಟ್, ಥರ್ಮಕೋಲ್ ಗ್ಲಾಸ್, ಕಿಂಗ್ ಫಿಲ್ಮ್ಸ್, ಪ್ಲಾಸ್ಟಿಕ್ ಮೈಕ್ರೋನ್‌ನಿಂದ ತಯಾರಿಸಿದ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ ಇಂತಹ ಸಾಮಾಗ್ರಿಗಳು ಕಂಡುಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News