×
Ad

ರೈತ ಮಹಿಳೆ ಆತ್ಮಹತ್ಯೆ

Update: 2016-12-14 23:17 IST

ಮೂಡಿಗೆರೆ, ಡಿ.14: ಸಾಲಬಾಧೆಯಿಂದ ರೈತಮಹಿಳೆ ಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾರದಹಳ್ಳಿ ಗ್ರಾಪಂ ವ್ಯಾಪ್ತಿಯ ಹಾಲೂರು ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪ್ರೇಮಾ (40) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಸಹಕಾರ ಸಂಘದಲ್ಲಿ 3 ಲಕ್ಷ ರೂ. ಸಾಲ ಮಾಡಿದ್ದರು.

ಪತಿ ಮೂರ್ತಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಈ ಕುಟುಂಬವು ಸಾಲಬಾಧೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿರುವುದೇ ಪ್ರೇಮಾ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಪ್ರಕರಣ ಕುರಿತು ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News