×
Ad

ರಾಷ್ಟ್ರೀಯ, ರಾಜ್ಯ ಹೆದ್ದಾರಿ ಸುತ್ತಮುತ್ತ 500 ಮೀಟರ್ ಅಂತರದಲ್ಲಿ ಮದ್ಯದಂಗಡಿ ನಿಷೇಧ : ಸುಪ್ರೀಂ ಆದೇಶ

Update: 2016-12-15 11:57 IST

ಹೊಸದಿಲ್ಲಿ, ಡಿ.15: ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ಸುತ್ತ ಮುತ್ತ 500 ಮೀಟರ್ ಅಂತರದಲ್ಲಿರುವ ಎಲ್ಲ ಮದ್ಯದಂಗಡಿ ಗಳನ್ನು ಮುಚ್ಚಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ನ್ಯಾಯಪೀಠ ಕೇಂದ್ರ ಹಾಗೂ ಹಾಗೂ ರಾಜ್ಯ ಸರಕಾರಕ್ಕೆ ಆದೇಶ ನೀಡಿದ್ದು, ಸರಕಾರ ಮುಂದಕ್ಕೆ ನ್ಯಾಯಾಲಯ ಹೇಳಿದ 500 ಮೀಟರ್ ವ್ಯಾಪ್ತಿಯೊಳಗೆ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಬಾರದು ಮತ್ತು ಈಗಾಗಲೇ ಈ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳ ಪರವಾನಿಗೆ ನವೀಕರಣ ಮಾಡಬಾರದು.
  ಎ.1, 2017ಕ್ಕೆ ಬಳಿಕ ಯಾವುದೇ ಮದ್ಯದಂಗಡಿಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯೊಳಗೆ ಇರಬಾರದು ಎಂದು ಸುಪ್ರೀಂ ಕೋರ್ಟ್‌ನ ಆದೇಶ ನೀಡಿದೆ.
 ಮದ್ಯ ಸೇವಿಸಿ ವಾಹನ ಚಾಲನೆಯಿಂದ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
,,,,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News