×
Ad

ಮೇಟಿ ಪ್ರಕರಣ ನೋವು ತಂದಿದೆ: ದಿನೇಶ್ ಗುಂಡೂರಾವ್

Update: 2016-12-15 15:33 IST

ಬಂಟ್ವಾಳ, ಡಿ.15: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಮೇಟಿಯವರ ವೈಯುಕ್ತಿಕ ವಿಚಾರವಾಗಿದ್ದು ಸರಕಾರಕ್ಕೆ ಸಂಬಂಧಿಸಿದ್ದಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. 

ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸಚಿವ ಬಿ.ರಮಾನಾಥ ರೈ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ ಮೇಟಿಯವರಿಂದ ರಾಜೀನಾಮೆ ಪಡೆದುಕೊಂಡಾಗಿದೆ. ಇದಕ್ಕೂ ಸರಕಾರದ ಆಡಳಿತಕ್ಕೂ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. 

ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ತಯಾರಿ ನಡೆಯುತ್ತಿದೆ. ವಿವಿಧೆಡೆಗಳಲ್ಲಿ ಸಮಾವೇಶಗಳನ್ನು ಸಂಘಟಿಸಲಾಗುತ್ತಿದ್ದು ಕಾಂಗ್ರೆಸ್ ಸರಕಾರ ಸಾಧನೆ ಬಗ್ಗೆ ಪ್ರಚಾರ ಇದರ ಉದ್ದೇಶವಾಗಿದೆ. ರಾಜ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಅವುಗಳಿಗೆ  ಸಾಕಷ್ಟು ಪ್ರಚಾರು ದೊರೆತಿಲ್ಲ. ಕಾಂಗ್ರೆಸ್ ನ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಹುರುಳಿಲ್ಲ ಎಂದವರು ತಿಳಿಸಿದರು. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News