×
Ad

12 ಕೋ.ರೂ.ವೆಚ್ಚದಲ್ಲಿ ಉರ್ವ ಮಾರುಕಟ್ಟೆ ನಿರ್ಮಾಣ: ಲೋಬೊ

Update: 2016-12-15 15:58 IST

ಮಂಗಳೂರು, ಡಿ.15: ಸುಮಾರು 12 ಕೋ.ರೂ. ವೆಚ್ಚದಲ್ಲಿ ಉರ್ವ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.

ಉರ್ವ ಮಾರಿಗುಡಿ ದೇವಸ್ಥಾನದ ಬಳಿಯ ಕಟ್ಟಪುಣಿಯನ್ನು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಹಾನಗರಪಾಲಿಕೆಯ ಸಾಮಾನ್ಯ ನಿಧಿಯಿಂದ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಕಟ್ಟಪುಣಿಯಲ್ಲಿ ಸಂಚರಿಸುತ್ತಿದ್ದವರು ಈಗ ರಸ್ತೆಯಾಗಿರುವುದರಿಂದ ನಿರಾತಂಕವಾಗಿ ಹೋಗಿಬರಬಹುದು. ಕಾಮಗಾರಿ ಕ್ಷಿಪ್ರಗತಿಯಲ್ಲಿ ಸಾಗಲು ಜನರ ಸಹಕಾರವೇ ಕಾರಣವಾಗಿದೆ. ಉರ್ವ ಮಾರುಕಟ್ಟೆ ನಿರ್ಮಾಣವಾದರೆ ಸುಲ್ತಾನ್ ಬತ್ತೇರಿಗೆ ಹೋಗುವ ರಸ್ತೆಯೂ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲಿದೆ ಎಂದು ಲೋಬೊ ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ರಾಧಾಕೃಷ್ಣ, ವಾರ್ಡ್ ಅಧ್ಯಕ್ಷ ಉಮೇಶ್ ಕೋಟ್ಯಾನ್, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ಆನಂದ, ರಮೇಶ್ ತಂತ್ರಿ, ಪುರುಷೋತ್ತಮ, ಗಣೇಶ್, ಪ್ರವೀಣ್, ಗುತ್ತಿಗೆದಾರ ಲಿಯಾಕತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News