ವೇಯ್ಟ್ ಲಿಫ್ಟಿಂಗ್ : ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
Update: 2016-12-16 18:12 IST
ಮೂಡುಬಿದಿರೆ, ಡಿ.16 : ದ.ಕ. ಜಿಲ್ಲಾ ವೇಯ್ಟ್ ಲಿಫ್ಟರ್ಸ್ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಡಾನ್‌ಬಾಸ್ಕೋ ಹಾಲ್‌ನಲ್ಲಿ ಮಂಗಳವಾರ ಜರುಗಿದ ದ.ಕ. ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದುಕೊಂಡರೆ , ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ತಂಡ ಎರಡೂ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ವೇಯ್ಟಲಿಫ್ಟಿಂಗ್ ಸಂಸ್ಥೆಯ ಅಧ್ಯಕ್ಷ ನಾಗೇಶ್ ಕುಮಾರ್, ಕಾರ್ಯದರ್ಶಿ ಕಮಲಾಕ್ಷ ಅಮೀನ್, ಅಂತರಾಷ್ಟ್ರೀಯ ವೇಯ್ಟೆಲಿಫ್ಟರ್ ಅರ್ಥರ್ ಡಿ’ಸೋಜಾ ಉಪಸ್ಥಿತರಿದ್ದು, ಬಹುಮಾನ ವಿತರಿಸಿದರು.