ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2016-12-16 18:58 IST
ಬೆಂಗಳೂರು, ಡಿ. 16: ಸಚಿವ ಸಂಪುಟ ವಿಸ್ತರಣೆ ಪ್ರಸ್ತಾಪ ಸದ್ಯಕ್ಕಿಲ್ಲ. ಎಚ್.ವೈ. ಮೇಟಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸದ್ಯಕ್ಕೆ ಯಾರನ್ನು ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಶುಕ್ರವಾರ ವಿಜಯ್ ದಿವಸ್ ಅಂಗವಾಗಿ ಇಲ್ಲಿನ ಇಂದಿರಾಗಾಂಧಿ ಸಂಗೀತ ಕಾರಂಜಿ ಸ್ಥಳದಲ್ಲಿರುವ ಸೈನಿಕರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಯಾರೂ ನನ್ನ ಬಳಿ ಬಂದಿಲ್ಲ. ನಿಮ್ಮ ಬಳಿಗೆ ಯಾರಾದರೂ ಬಂದಿದ್ದರೆ ಎಂದು ಪ್ರಶ್ನಿಸಿದರು.
ಸೈನಿಕರಿಗೆ ನೆರವು: ವೀರ ಯೋಧರು ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವುದರಿಂದಲೇ ನಾವೆಲ್ಲ ನೆಮ್ಮದಿಯಿಂದ ಇದ್ದೇವೆ. 1971ರ ಡಿ.16ರಂದು ಭಾರತ-ಪಾಕ್ ನಡುವಿನ ಯುದ್ಧದಲ್ಲಿ ಹುತಾತ್ಮ ಸೈನಿಕರಿಗೆ ಅಗತ್ಯ ನೆರವು ನೀಡುವುದು ನಮ್ಮ ಕರ್ತವ್ಯ ಎಂದು ಸಿದ್ದರಾಮಯ್ಯ ಬಣ್ಣಿಸಿದರು.