×
Ad

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಮೆಂಟ್: ಭಾರತ ಫೈನಲ್‌ಗೆ ಲಗ್ಗೆ

Update: 2016-12-16 23:05 IST

ಲಕ್ನೋ, ಡಿ.16: ಬಲಿಷ್ಠ ತಂಡ ಆಸ್ಟ್ರೇಲಿಯವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳ ಅಂತರದಿಂದ ಮಣಿಸಿರುವ ಆತಿಥೇಯ ಭಾರತ ಇಲ್ಲಿ ನಡೆಯುತ್ತಿರುವ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಮೆಂಟ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಇಲ್ಲಿನ ಮೇಜರ್ ಧ್ಯಾನ್‌ಚಂದ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಎರಡನೆ ಸೆಮಿ ಫೈನಲ್‌ನಲ್ಲಿ ಪೂರ್ಣಾವಧಿ ಆಟದಲ್ಲಿ ಉಭಯ ತಂಡಗಳು 2-2 ರಿಂದ ಸಮಬಲ ಸಾಧಿಸಿದವು. ಆಗ ಫಲಿತಾಂಶ ನಿರ್ಧರಿಸಲು ಪೆನಾಲ್ಟಿ ಶೂಟೌಟ್ ಅಳವಡಿಸಲಾಯಿತು. ಪೆನಾಲ್ಟಿಯಲ್ಲಿ ಜಯಿಸಿರುವ ಭಾರತ ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಬೆಲ್ಜಿಯಂ ತಂಡವನ್ನು ಎದುರಿಸಲಿದೆ. ಬೆಲ್ಜಿಯಂ ಮೊದಲ ಸೆಮಿ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಜರ್ಮನಿಯನ್ನು ಮಣಿಸಿತು.

ಮಾಜಿ ಚಾಂಪಿಯನ್ ಆಸ್ಟ್ರೇಲಿಯ 14ನೆ ನಿಮಿಷದಲ್ಲಿ ಮುನ್ನಡೆ ಸಾಧಿಸಿತು. 42ನೆ ನಿಮಿಷದಲ್ಲಿ ಗೋಲು ಬಾರಿಸಿದ ಗುರ್ಜಂತ್ ಸಿಂಗ್ ಸ್ಕೋರನ್ನು ಸಮಬಲಗೊಳಿಸಿದರು. 48ನೆ ನಿಮಿಷದಲ್ಲಿ ಗೋಲು ಬಾರಿಸಿದ ಮನ್‌ದೀಪ್ ಸಿಂಗ್ ಭಾರತಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟರು. 57ನೆ ನಿಮಿಷದಲ್ಲಿ ಗೋಲು ಬಾರಿಸಿದ ಆಸ್ಟ್ರೇಲಿಯ ಪಂದ್ಯವನ್ನು 2-2 ರಿಂದ ಸಮಬಲಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News