ಫೆ.7ರಿಂದ ಜಿಲ್ಲೆಯಾದ್ಯಂತ ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮ
ಮಡಿಕೇರಿ, ಡಿ.17: ಇತ್ತೀಚಿನ ದಿನಗಳಲ್ಲಿ ದಡಾರ-ರುಬೆಲ್ಲಾ ಎಂಬ ವೈರಸ್ ಕಾಣಿಸಿ ಕೊಳ್ಳುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಪಲ್ಸ್ ಪೋಲಿಯೊ ಮಾದರಿಯಲ್ಲಿ 2017 ಫೆ.7ರಿಂದ ದಡಾರುಬೆಲ್ಲಾ ಲಸಿಕಾ ಅಭಿಯಾನವನ್ನು ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಆರಂಭಿಸಲಾಗುತ್ತಿದ್ದು, ಈ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ದಡಾರ-ರುಬೆಲ್ಲಾ ಲಸಿಕಾ ಅಭಿಯಾನದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಜಿಲ್ಲೆಯಾದ್ಯಂತ ಫೆ.7ರಿಂದ ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಆರಂಭಿಸಲಾಗುತ್ತಿದ್ದು,ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ,ಸಾರ್ವಜನಿಕ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಸಮನ್ವಯತೆದಿಂದ ಲಸಿಕಾ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಆರ್‌ಸಿಎಚ್ ಅಧಿಕಾರಿ ಡಾ. ಎಂ.ಎನ್.ನಿಲೇಶ್ ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ದೇವಿ ಆನಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಮ್ತಾಝ್‌ಹಾಗೂ ಆರೋಗ್ಯ ಇಲಾಖೆಯ ವಿವಿಧ ಸಿಬ್ಬಂದಿ ಮತ್ತಿತರರು ಉಪಸ್ಥಿರಿದ್ದರು.