×
Ad

ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಪಂಜಾಬ್ ಭೇಟಿ

Update: 2016-12-17 23:36 IST

ಉಡುಪಿ, ಡಿ.17: ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಇತ್ತೀಚೆಗೆ ಪಂಜಾಬ್ ರಾಜ್ಯದ ಪಾಟಿಯಾಲದಲ್ಲಿರುವ ನೇತಾಜಿ ಸುಭಾಷ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಪ್ ಸ್ಪೋರ್ಟ್ಸ್ ಸಂಸ್ಥೆಗೆ ಭೇಟಿ ನೀಡಿದರು.

ಸಂಸ್ಥೆಯಲ್ಲಿನ ಮೂಲಭೂತ ಸೌಕರ್ಯ ಮತ್ತು ಸೌಲ್ಯಗಳ ಬಗ್ಗೆ ಅಧ್ಯಯನ ನಡೆಸಿ ಸಂಸ್ಥೆಯ ಅಧಿಕಾರಿಗಳು ಮತ್ತು ಬೋಧಕ ವೃಂದದವರೊಂದಿಗೆ ಚರ್ಚೆ ನಡೆಸಿದರು. ಸಂಸ್ಥೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಅಲ್ಲಿ ಒದಗಿಸಿರುವ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳಾದ ಡಾ.ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಅನುಪಮ್ ಅಗರ್‌ವಾಲ್, ನೇತಾಜಿ ಸುಬಾಷ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಪ್ ಸ್ಪೋರ್ಟ್ಸ್ ಸಂಸ್ಥೆಯ ಡೀನ್ ಡಾ.ರಾಜ್‌ದೀಪ್ ಕೌರ್, ಶೈಕ್ಷಣಿಕ ಪ್ರಭಾರಿ ಡಾ.ಡಿ.ಕೆ.ರಾಠೋಡ್, ಉಪನಿರ್ದೇಶಕ ಸಲೀಲ್ ಭಟ್ನಾಗರ್, ಹ್ಯಾಂಡ್‌ಬಾಲ್ ಮುಖ್ಯ ತರಬೇತುದಾರ ಮೋಹಿಂದರ್‌ಲಾಲ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News