ಶುಲ್ಕ ವಿನಾಯಿತಿಗೆ ಅರ್ಜಿ ಆಹ್ವಾನ

Update: 2016-12-17 18:34 GMT

ಉಡುಪಿ, ಡಿ.17: ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಹಾಗೂ ಇತರ ಓಬಿಸಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ 5,000 ರೂ.ನಂತೆ ವ್ಯಾಸಂಗ ವೇತನ/ಫೆೆಲೋಶಿಪ್ ಹಾಗೂ ಶುಲ್ಕ ವಿನಾಯಿತಿ ಮಂಜೂರು ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ ಫೆಲೋಶಿಪ್‌ಗೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರೆಯುತ್ತಿರುವ ಅರ್ಹ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

www.backward classes.kar.nic.inಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ನ್ನು ಅಥವಾ ದೂರವಾಣಿ ಸಂಖ್ಯೆ 0820- 2574881ನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖಾ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News