ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ
Update: 2016-12-18 23:55 IST
ಪುತ್ತೂರು, ಡಿ.18: ತಾಲೂಕು ಮಟ್ಟದ ಕರಾವಳಿ ಉತ್ಸವದ ಅಂಗವಾಗಿ ಡಾ. ಶಿವರಾಮ ಕಾರಂತ ಬಾಲವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಚಿತ್ರಕಲಾ ಸರ್ಧೆಯನ್ನು ರವಿವಾರ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಎಎಸ್ಪಿರಿಷ್ಯಂತ್ ಉದ್ಘಾಟಿಸಿದರು. ವೇದಿಕೆಯಲ್ಲಿ ತಹಶೀಲ್ದಾರ್ ಅನಂತಶಂಕರ್, ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ, ಶಿಕ್ಷಣಾಕಾರಿ ಶಶಿಧರ್, ಉಪಸ್ಥಿತರಿದ್ದರು.