ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2016-12-18 18:33 GMT

ಕಾಸರಗೋಡು, ಡಿ.18: ಮನೆಯೊಂದಕ್ಕೆ ನುಗ್ಗಿದ ಕಳ್ಳರು 17 ಪವನ್ ಚಿನ್ನಾಭರಣ ಕಳವುಗೈದ ಘಟನೆ ನಗರ ವಿದ್ಯಾನಗರ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ನಡೆದಿದೆ.

ಆಲಂಪಾಡಿ ಅಕ್ಕರೆಪಳ್ಳದ ಇಬ್ರಾಹೀಂ ಎಂಬವರ ಮನೆಯಲ್ಲಿ ಈ ಪ್ರಕರಣ ನಡೆದಿದೆ. ಶನಿವಾರ ರಾತ್ರಿ ಘಟನೆ ನಡೆದಿದ್ದು, ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದು, ರವಿವಾರ ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮನೆಯ ಹಿಂಬದಿ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ.

 ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬೆರಳಚ್ಚು ತಜ್ಞರು, ಶ್ವಾನ ದಳದ ಸಿಬ್ಬಂದಿ ಮಾಹಿತಿ ಕಲೆ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News