ಯಾಸೀನ್ ಭಟ್ಕಳ್ ಸೇರಿದಂತೆ ಐವರಿಗೆ ಗಲ್ಲು ಶಿಕ್ಷೆ
Update: 2016-12-19 17:19 IST
ಹೊಸದಿಲ್ಲಿ, ಡಿ.19: ಹೈದರಾಬಾದ್ ನ ದಿಲ್ ಸುಖ್ ನಗರದಲ್ಲಿ ಮೂರು ವರ್ಷಗಳ ಹಿಂದೆ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಯಾಸೀನ್ ಭಟ್ಕಳ್ ಸೇರಿದಂತೆ ಐವರು ಆರೋಪಿಗಳಿಗೆ ಎನ್‌ಐಎ ವಿಶೇಷ ನ್ಯಾಯಾಲಯ ಇಂದು ಗಲ್ಲು ಶಿಕ್ಷೆ ವಿಧಿಸಿದೆ.
2013 , ಫೆ.21ರಂದು ದಿಲ್‌ಸುಖ್ ನಗರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಒಟ್ಟು 18 ಮಂದಿ ಮೃತಪಟ್ಟು 119 ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಐವರು ಆರೋಪಿಗಳಿಗೆ ಎನ್‌ಐಎ ವಿಶೇಷ ನ್ಯಾಯಾಲಯ ಮರಣ ದಂಡನೆ ಸಜೆ ವಿಧಿಸಿದೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.