ಬಂಟ್ವಾಳ : ಬೈಕ್‌ನಲ್ಲಿ ಬಂದು ಇರಿತ , ಯವಕರಿಬ್ಬರು ಗಂಭೀರ
ಬಂಟ್ವಾಳ , ಡಿ.19 : ಬೈಕ್‌ನಲ್ಲಿ ಬರುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕ್‌ನಲ್ಲಿ ಬಂದ ಮೂವರ ತಂಡ ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಳ್ಳಿಗೆ ಗ್ರಾಮದ ಕಲ್ಪನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮಲ್ಲೂರು ಬದ್ರಿಯಾ ನಗರದ ನಿವಾಸಿ, ಲಾರಿ ಚಾಲಕ ಅಬ್ಬಾಸ್ ಎಂಬವರ ಪುತ್ರ ಜುನೈದ್(17), ಬಿ.ಸಿ.ರೋಡ್ ಶಾಂತಿ ಅಂಗಡಿ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಸಿನಾನ್(18) ಚೂರಿ ಇರಿತದಿಂದ ಗಾಯಗೊಂಡವರು.
ಇವರು ಗುರುಪುರ ಕೈಕಂಬದ ಪ್ರೀಮಿಯರ್ ಹಾಲ್‌ಗೆ ಮದುವೆಗೆ ತೆರಳಿ ವಾಪಸ್ ಬರುತ್ತಿದ್ದಾಗ ಆರ್‌ಎಕ್ಸ್ 100 ಬೈಕ್‌ನಲ್ಲಿ ಬಂದ ಮೂವರು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಚೂರಿ ಇರಿತದಿಂದ ಜುನೈದ್‌ನ ಬಲ ಕೈಗೆ ಹಾಗೂ ಸಿನಾನ್‌ನ ಕುತ್ತಿಗೆಗೆ ಆಳವಾದ ಗಾಯಗಳಾಗಿದ್ದು , ತುಂಬೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಮಂಗಳೂರು ಕಮಿಷನರ್ ಚಂದ್ರಶೇಖರ್, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್., ಬಂಟ್ವಾಳ ವೃತ್ತ ನಿರೀಕ್ಷಕ ಮಂಜಯ್ಯ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.