ಗಾಂಜಾ ಸಹಿತ ಆರೋಪಿ ಸೆರೆ
Update: 2016-12-19 21:52 IST
ಮಂಗಳೂರು, ಡಿ.19: ನಗರ ಹೊರವಲಯದ ಕೂಳೂರು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಕಾವೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತನನ್ನು ಇಮ್ತಿಯಾಝ್ ಎಂದು ಗುರುತಿಸಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಅಝೀಝ್ ಎಂಬಾತ ಪರಾರಿಯಾಗಿದ್ದಾನೆ. ಆರೋಪಿಯಿಂದ 2 ಕೆಜಿ ಗಾಂಜಾ ಮತ್ತು ದ್ವಿಚಕ್ರ ವಾಹನ ಹಾಗು ನಗದು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.