×
Ad

ಶಾಂತಾ ಶೆಟ್ಟಿ

Update: 2016-12-20 00:16 IST

ಮೂಡುಬಿದಿರೆ, ಡಿ.19: ಪುತ್ತಿಗೆಗುತ್ತು ಕಡಂದಲೆ ಪರಾರಿ ದಿ. ಕೆ.ಪಿ.ಸುಬ್ಬಯ್ಯಶೆಟ್ಟಿ ಎಂಬವರ ಪತ್ನಿ ಕವತ್ತಾರುಗುತ್ತಿನ ಪಾಂಡ್ಯಾರು ಬರ್ಪಣಿ ಶಾಂತಾ ಶೆಟ್ಟಿ(80) ಸೋಮವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ದ.ಕ. ಜಿಪಂನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸುಚರಿತ ಶೆಟ್ಟಿ ಸಹಿತ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಅಮರನಾಥ ಶೆಟ್ಟಿ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಪಂ ಸದಸ್ಯ ಈಶ್ವರ್ ಕಟೀಲು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಉಪಾಧ್ಯಕ್ಷ ಕೆ.ಪಿ. ಜಗದೀಶ ಅಧಿಕಾರಿ, ಪ್ರ. ಕಾರ್ಯದರ್ಶಿ ಸುದರ್ಶನ್ ಎಂ., ಉಮಾನಾಥ ಕೋಟ್ಯಾನ್, ಜಿಲ್ಲಾ ಬಂಟರ ಸಂಘದ ಪ್ರ. ಕಾರ್ಯದರ್ಶಿ ಮೇಘನಾಥ್ ಶೆಟ್ಟಿ ಮತ್ತಿತರ ಗಣ್ಯರು ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News