ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು
Update: 2016-12-20 00:21 IST
ಉಪ್ಪಿನಂಗಡಿ, ಡಿ.19: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ, ಲಾರಿಯನ್ನು ವಶಪಡಿಸಿಕೊಂಡ ಘಟನೆ ಪೆರ್ನೆ ಗ್ರಾಮದ ಬಿಳಿಯೂರು ಎಂಬಲ್ಲಿ ಸೋಮವಾರ ನಡೆದಿದೆ.
ಬಿಳಿಯೂರು ಎಂಬಲ್ಲಿ ಪೆರ್ನೆಯ ಹನೀಫ್ ಎಂಬಾತ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಎಸ್ಸೈ ರತನ್ ಮತ್ತು ಸಿಬ್ಬಂದಿ ಹಠಾತ್ ದಾಳಿ ನಡೆಸಿ ಲಾರಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ, ಗಣಿ ಮತ್ತು ಭೂವಿಜ್ಞ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.