ಕಾರು ಢಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು
Update: 2016-12-20 00:23 IST
ಬ್ರಹ್ಮಾವರ, ಡಿ.19: ಉಪ್ಪೂರು ಗ್ರಾಮದ ಹೆರೆಬೆಟ್ಟು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಗಿನ ಜಾವ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದು ಬಳಿಕ ಬ್ಯಾರಿಕೇಡ್‌ಗೆ ಢಿಕ್ಕಿಯಾಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.