ಸಚಿವರು , ಎಂಎಲ್‌ಸಿಗಳ ಹಗರಣಗಳು ಇನ್ನೆರಡು ದಿನಗಳಲ್ಲಿ ಬಯಲು : ಬಿಎಸ್‌ವೈ ಹೊಸ ಬಾಂಬ್
Update: 2016-12-20 13:44 IST
ಬೆಂಗಳೂರು , ಡಿ.20: ಆಡಳಿತಾರೂಢ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯರು ಮತ್ತು ಸಚಿವರ ಬಣ್ಣ ಇನ್ನೆರಡು ದಿನಗಳಲ್ಲಿ ಬಯಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಯಲಾದ ಹಗರಣಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲ ಬುಡಕ್ಕೆ ಬರುತ್ತದೆ ಎಂದು ಅವರು ಹೇಳಿದರು.
ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಅವರ ಜಯ ಖಚಿತ. ಈ ಚುನಾವಣೆಯಲ್ಲಿ ಸಚಿವ ಮಹದೇವಪ್ಪ ಅವರ ಪುತ್ರ ರಾಹುಲ್ ಬೋಸ್ ಸ್ಪರ್ಧಿಸುವುದಿಲ್ಲ. .ಇದಕ್ಕೆ ಕಾರಣ ನಾನು ಹೇಳುವುದಿಲ್ಲ ಎರಡು ದಿನಗಳಲ್ಲಿ ಗೊತ್ತಾಗಲಿದೆ ಎಂದು ಯಡಿಯೂರಪ್ಪ ನುಡಿದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.