ರಾಜ್ಯ ಸರಕಾರ ಅಸ್ಥಿರಕ್ಕೆ ಬಿಜೆಪಿ ಹುನ್ನಾರ: ಉಗ್ರಪ್ಪ ಆರೋಪ
Update: 2016-12-20 14:49 IST
ಬೆಂಗಳೂರು, ಡಿ.20: ಸಚಿವರ ಬಂಧನ ಕುರಿತು ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ, ಈ ಹೇಳಿಕೆಯ ಹಿಂದೆ ದೊಡ್ಡ ಷಡ್ಯಂತರ ಅಡಗಿದೆ. ಯಡಿಯೂರಪ್ಪ ಅವರಿಗೆ ಸಿಬಿಐ ಬ್ರೀಫ್ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಸಿಬಿಐ ಬಳಸಿಕೊಂಡು ಸರಕಾರವನ್ನು ಅತಂತ್ರಗೊಳಿಸುವ ಯತ್ನ ನಡೆಯುತ್ತಿದೆ ಎಂದು ಉಗ್ರಪ್ಫ ಆರೋಪಿಸಿದರು.
ಸಿಎಂ ಭೇಟಿಗೆ ಅವಕಾಶ ನೀಡದ ಪ್ರಧಾನಿ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.