ಕೊಣಾಜೆ: ಗಾಂಜಾ ಪತ್ತೆ , ಆರೋಪಿಗಳ ಬಂಧನ
ಕೊಣಾಜೆ , ಡಿ. 20 : ದೇರಳಕಟ್ಟೆಯಲ್ಲಿರುವ ಬೆಳ್ಮ ಗ್ರಾಮ ಪಂಚಾಯಿತಿ ಕಚೇರಿ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ದೇರಳಕಟ್ಟೆ ಜಲಾಲಾಭಾಗ್‌ನ ನೌಷಾದ್ (20) ಹಾಗೂ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಮಸೀದಿ ಬಳಿಯ ನಿವಾರಿ ಶಿಯಾಬ್ (20) ಎಂಬವರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರ ಬಳಿ ಗಾಂಜಾ ಪತ್ತೆಯಾಗಿದ್ದು, ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದು ಬೆಳಕಿಗೆ ಬಂದಿದೆ.
ಇನ್ನಷ್ಟು ವಿಚಾರಣೆ ನಡೆಸಿದಾಗ ಕೆಲವು ದಿನಗಳ ಹಿಂದೆ ದೇರಳಕಟ್ಟೆ ಮತ್ತು ನಾಟೆಕಲ್‌ನಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣವನ್ನೂ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕೊಣಾಜೆ ಠಾಣಾಧಿಕಾರಿ ಅಶೋಕ್ ಪಿ, ಪಿಎಸ್‌ಐ ಸುಕುಮಾರನ್, ಸಿಬ್ಬಂದಿಗಳಾದ ದುರ್ಗಾ ಪ್ರಸಾದ್, ಶಿವಪ್ರಸಾದ್, ಅಶೋಕ್ ಹಾಗೂ ಜಗನ್ನಾಥ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.