×
Ad

ಚಂಡೀಗಡ ನಗರಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು

Update: 2016-12-20 20:54 IST

ಚಂಡೀಗಡ, ಡಿ.20: ನೋಟು ಅಮಾನ್ಯ ಕ್ರಮ ಪ್ರಮುಖ ವಿಷಯವಾಗಿದ್ದ ಚಂಡೀಗಡ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ- ಶಿರೋಮಣಿ ಅಕಾಲಿದಳ ಮೈತ್ರಿಕೂಟವು ಭಾರೀ ಗೆಲುವು ಸಾಧಿಸಿದೆ. ಇದರೊಂದಿಗೆ ಸತತ ಮೂರು ಬಾರಿ ನಗರಪಾಲಿಕೆಯಲ್ಲಿ ಬಹುಮತ ಸಾಧಿಸಿದ್ದ ಕಾಂಗ್ರೆಸ್‌ಗೆ ಭಾರೀ ಮುಖಭಂಗವಾಗಿದೆ.

ನಗರಪಾಲಿಕೆಯ 26 ಸ್ಥಾನಗಳಲ್ಲಿ ಬಿಜೆಪಿ 20, ಅದರ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳ 1 ಸ್ಥಾನದಲ್ಲಿ ಗೆಲ್ಲುವ ಮೂಲಕ ಭರ್ಜರಿ ಸಾಧನೆ ತೋರಿದೆ. ಕಾಂಗ್ರೆಸ್ ಪಕ್ಷ ಕೇವಲ ನಾಲ್ಕು ಸ್ಥಾನ ಗಳಿಸಿದರೆ, ಓರ್ವ ಪಕ್ಷೇತರ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಪಕ್ಷದ ಗೆಲುವಿಗೆ ಕಾರ್ಯಕರ್ತರನ್ನು ಅಭಿನಂದಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸರಕಾರದ ನೋಟು ಅಮಾನ್ಯ ನಿರ್ಧಾರದ ಬಳಿಕ ಬಿಜೆಪಿ ಪ್ರತಿಯೊಂದು ಚುನಾವಣೆಯಲ್ಲೂ ಗೆಲುವು ಸಾಧಿಸುತ್ತಿದೆ ಎಂದಿದ್ದಾರೆ. ಮೊದಲು ಐದು ರಾಜ್ಯಗಳ ಉಪಚುನಾವಣೆಯಲ್ಲಿ ಗೆದ್ದೆವು, ಬಳಿಕ ಥಾಣೆ, ರಾಜಸ್ತಾನ ಮತ್ತು ಗುಜರಾತ್ ನಗರಪಾಲಿಕೆ ಚುನಾವಣೆ, ಮತ್ತು ಇದೀಗ ಚಂಡೀಗಡ ನಗರಪಾಲಿಕೆ ಚುನಾವಣೆ... ಜನತೆ ಹೃತ್ಪೂರ್ವಕವಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

 ಜನತೆ ಭ್ರಷ್ಟಾಚಾರದ ವಿರುದ್ಧದ ಹೋರಾಟದ ಅಂಗವಾಗಿ ಪ್ರಧಾನಿ ಮೋದಿ ಕೈಗೊಂಡಿರುವ ನೋಟು ಅಮಾನ್ಯ ನಿರ್ಧಾರವನ್ನು ಬೆಂಬಲಿಸಿದ್ದಾರೆ ಮತ್ತು ಕೇಂದ್ರ ಸರಕಾರ ಬಡವರ ಪರ ಕೈಗೊಂಡಿರುವ ಕ್ರಮಗಳನ್ನು ಅರಿತುಕೊಂಡಿದ್ದಾರೆ ಎಂದು ಚಂಡೀಗಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕಿರಣ್ ಖೇರ್ ಹೇಳಿದ್ದಾರೆ.

  ನಗರಪಾಲಿಕೆಯಲ್ಲಿ ಕಾಂಗ್ರೆಸ್‌ಗೆ ಬಹುಮತವಿದ್ದರೂ, ಕಳೆದ ಜನವರಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News