ಕೆಮ್ತೂರು ತುಳು ನಾಟಕ ಸ್ಪರ್ಧೆಗೆ ಚಾಲನೆ
ಉಡುಪಿ, ಡಿ.20: ಉಡುಪಿ ತುಳುಕೂಟದ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ 9ದಿನಗಳ ಕಾಲ ಹಮ್ಮಿ ಕೊಳ್ಳಲಾದ ಕೆಮ್ತೂರು ತುಳು ನಾಟಕ ಸ್ಪರ್ಧೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಎಂ.ಜಾನಕಿ ಬ್ರಹ್ಮಾವರ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ನೀಲಾವರ ದೇವಳದ ಮಾಜಿ ಮೊಕ್ತೇಸರ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿದರು.
ಅಧ್ಯಕ್ಷತೆಯನ್ನು ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು.
ವೇದಿಕೆಯಲ್ಲಿ ವಿಜಯಕುಮಾರ್ ಶೆಟ್ಟಿ, ತುಳುಕೂಟದ ಉಪಾಧ್ಯಕ್ಷ ಮುಹಮ್ಮದ್ ವೌಲ, ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾ ಧಿಕಾರಿ ಎಂ.ಜಿ.ಜೈತನ್ಯ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಯಶೋಧಾ ಸ್ವಾಗತಿಸಿ ದರು. ನಾಟಕ ಸ್ಪರ್ಧಾ ಸಮಿತಿಯ ಸಂಚಾಲಕ ಪ್ರಭಾಕರ ಭಂಡಾರಿ ಪ್ರಾಸ್ತಾ ವಿಕವಾಗಿ ಮಾತನಾಡಿದರು.
ಜೊತೆ ಕಾರ್ಯದರ್ಶಿ ಮೋಹನ್ ಶೆಟ್ಟಿ ವಂದಿಸಿದರು. ಸದಸ್ಯ ಯಾದವ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಂಗಳೂರಿನ ತೃಪ್ತಿ ಕಲಾವಿದರು ತಂಡದಿಂದ ಬದುಕುನೆಂಚ ನಾಟಕ ಪ್ರದರ್ಶನಗೊಂಡಿತು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.