ಕೆ.ಟಿ.ಗಟ್ಟಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Update: 2016-12-21 11:54 IST
ಬೆಳ್ತಂಗಡಿ, ಡಿ.21: ಹಿರಿಯ ಸಾಹಿತಿ, ಕಾದಂಬರಿಕಾರ ಕೆ.ಟಿ.ಗಟ್ಟಿ ಅವರಿಗೆ ಘೋಷಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಬುಧವಾರ ಉಜಿರೆಯಲ್ಲಿರುವ ಅವರ ನಿವಾಸದಲ್ಲಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ಪ್ರದಾನ ಮಾಡಿದರು.
ಕೆ.ಟಿ.ಗಟ್ಟಿ ಅವರಿಗೆ 2016ನೆ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಿಅಲಾಗಿತ್ತು. ಆದರೆ ಅನಾನುಕೂಲತೆಗಳಿಂದಾಗಿ ಅವರು ರಾಜ್ಯೋತ್ಸವದ ದಿನ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ತೆರಳಿರಲಿಲ್ಲ. ಈ ಹಿನ್ನಲೆಯಲ್ಲಿ ಸಚಿವೇ ಉಮಾಶ್ರೀಯವರು ಖುದ್ದಾಗಿ ಗಟ್ಟಿಯವರ ಹಿಮನೆಗೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.