×
Ad

ಮೌಢ್ಯಪ್ರತಿಬಂಧಕ ಕಾಯ್ದೆ ಜಾರಿಯಾಗದಿರಲು ಪಟ್ಟಭದ್ರ ಹಿತಾಸಕ್ತಿಗಳೇ ಕಾರಣ: ಸಿದ್ದರಾಮಯ್ಯ ಟ್ವೀಟ್

Update: 2016-12-21 13:00 IST

ಬೆಂಗಳೂರು, ಡಿ.21: ರಾಜ್ಯದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದಾಗಿ ಮೂಢನಂಬಿಕೆ ವಿರೋಧಿ ಕಾನೂನು ಜಾರಿಗೆ ತರಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ, ಮೌಢ್ಯಪ್ರತಿಬಂಧಕ ಕಾಯ್ದೆ ಜಾರಿ ವಿಳಂಬಕ್ಕೆ ಕೆಲ ಪಟ್ಟಭದ್ರ ಹಿತಾಸಕ್ತಿಗಳೇ ಕಾರಣ ಎಂದು ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಸರಕಾರ ಮುಂದಾಗಿದ್ದ ವೇಳೆ ಬಿಜೆಪಿ ಪ್ರಬಲ ವಿರೋಧ ವ್ಯಕ್ತಪಡಿಸಿತ್ತು. ಸಂಘಪರಿವಾರದ ಸಂಘಟನೆಗಳು, ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದರು. ದೊಡ್ಡ ಮಟ್ಟದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿದಿತ್ತು.
ಇದೀಗ ಸಿದ್ದರಾಮಯ್ಯ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿ ವಿಳಂಬಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಸರಕಾರಕ್ಕೆ ಆಸಕ್ತಿ ಇದ್ದರೂ ಕೆಲವರ ಸಲುವಾಗಿ ಕಾಯ್ದೆ ಜಾರಿಯಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News