ಕೇರಳ:ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್

Update: 2016-12-21 09:19 GMT
ಸಾಂದರ್ಭಿಕ ಚಿತ್ರ

ಮಲಪ್ಪುರಂ,ಡಿ.21: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಆರೋಪದಲ್ಲಿ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿನ ಸರಕಾರಿ ವೈದ್ಯಕೀಯ ಕಾಲೇಜಿನ ಕನಿಷ್ಠ 21 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

ಆರೋಪಿಗಳು ಕಿರಿಯ ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛ ಮಾಡಿಸಿದ್ದಲ್ಲದೆ ಕಲುಷಿತ ನೀರನ್ನು ಸೇವಿಸುವಂತೆ ಬಲಾತ್ಕರಿಸಿದ್ದರು.

ಸುಮಾರು 40 ವಿದ್ಯಾರ್ಥಿಗಳು ತಮ್ಮ ಮೇಲಿನ ರ್ಯಾಂಗಿಂಗ್ ವಿರುದ್ಧ ಕಾಲೇಜಿನ ಆಡಳಿತ ಮಂಡಳಿಗೆ ದೂರು ಸಲ್ಲಿಸಿದ್ದರು.

ಕಾಲೇಜಿನ ಆಂತರಿಕ ಸಮಿತಿಯು ತನಿಖೆಯನ್ನು ಆರಂಭಿಸಿದ್ದು, ತನ್ನ ವರದಿಯನ್ನು ಪೊಲೀಸ್ ಮತ್ತು ಮಾಧ್ಯಮ ಪ್ರತಿನಿಧಿಗಳನ್ನೊಳಗೊಂಡಿರುವ ರ್ಯಾಂಗಿಂಗ್ ನಿಗ್ರಹ ಸಮಿತಿಗೆ ಸಲ್ಲಿಸಲಿದೆ. ಈ ಸಮಿತಿಯು ವರದಿಯನ್ನು ಪರಿಶೀಲಿಸಿ ಪೊಲೀಸ್ ದೂರನ್ನು ದಾಖಲಿಸಲಿದೆ.

ಕೊಟ್ಟಾಯಂ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಹೆಸರಿನಲ್ಲಿ ತೀವ್ರ ಚಿತ್ರಹಿಂಸೆ ನೀಡಿ ತಲೆಮರೆಸಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳ ಪೈಕಿ ಆರು ಜನರು ಎರಡು ದಿನಗಳ ಹಿಂದಷ್ಟೇ ಪೊಲೀಸರಿಗೆ ಶರಣಾಗಿದ್ದಾರೆ. ಇತರ ಇಬ್ಬರು ಇನ್ನೂ ಭೂಗತರಾಗಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News