ಪರಿಸರ ಸಂರಕ್ಷಣೆ ನಮ್ಮೆಲ್ಲೆರ ಆದ್ಯಕರ್ತವ್ಯ: ಧರ್ಮೇಗೌಡ

Update: 2016-12-21 10:56 GMT

ಚಿಕ್ಕಮಗಳೂರು, ಡಿ.21: ಹವಾಮಾನ ವೈಪರೀತ್ಯ ಮತ್ತು ಬರದ ಸ್ಥಿತಿಗೆ ಮಾನವನ ದುರಾಸೆಯೇ ಕಾರಣ. ಮರಗಿಡಗಳನ್ನು ಪೋಷಿಸಿ ರಕ್ಷಿಸಿದರೆ ಹವಾಮಾನ ವೈಪರೀತ್ಯದಿಂದ ಆಗುವ ಅನಾಹುತಗಳನ್ನು ಒಂದು ಹಂತದವರೆಗೆ ತಪ್ಪಿಸಬಹುದು ಎಂದು ಮಾಜಿ ಶಾಸಕ ಹಾಗೂ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಧರ್ಮೇಗೌಡ ಹೇಳಿದರು.

ಅವರು ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಬಾರ್ಡ್ ವತಿಯಿಂದ ಯೋಜಿಸಿದ್ದ ರೈತರ ಆದಾಯವನ್ನು 2022ರ ಒಳಗಾಗಿ ದ್ವಿಗುಣಗೊಳಿಸುವ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಬಾರ್ಡ್ ವತಿಯಿಂದ ಹೊರತಂದಿರುವ ಪೊಟೆನ್ಷನಲ್ ಲಿಂಕ್ಡ್ ಕ್ರೆಡಿಟ್ ಪ್ಲಾನ್ ಪುಸ್ತಕವನ್ನು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಡಾ.ಆರ್.ರಾಗಪ್ರಿಯಾ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿ ಅವರು, ಕೃಷಿ ಆದಾಯವನ್ನು ಹೆಚ್ಚಳಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಈಗಿನಿಂದಲೇ ಮಣ್ಣಿನ ಫಲವತ್ತತ್ತೆಯನ್ನು ಹೆಚ್ಚಿಸಲು ರೈತರಿಗೆ ಸೂಕ್ತ ಮಾಹಿತಿ ನೀಡಬೇಕು. ನದಿಗಳ ಪುನಶ್ಚೇತನ ಕಾರ್ಯ, ಜಲಮೂಲಗಳನ್ನು ಉಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತರಾಗಬೇಕು ಎಂದರು.

ಮೂಡಿಗೆರೆಯ ತೋಟಗಾರಿಕೆ ವಿಜ್ಞಾನ ಕೇಂದ್ರದ ವಿಜ್ಞಾನಿ ಭರತ್‌ಕುಮಾರ್ ಮಾತನಾಡಿ, ರೈತರ ಮಾನಸಿಕ ಸ್ಥಿತಿ ಬದಲಾಗಬೇಕು. ನಮ್ಮ ರೈತರಲ್ಲಿ ಶೇ.82 ರಷ್ಟು ಮಂದಿ ಹಿಂದಿನ ಸುಧಾರಣೆಯಾಗದ ಕೃಷಿ ಪದ್ಧತಿಯನ್ನು ಅವಲಂಬಿಸಿದ್ದಾರೆ. ಹಳೆಯ ಮಾದರಿಯ ಕೃಷಿ ಪದ್ಧತಿಯನ್ನೇ ಅವಲಂಬಿಸದೇ ಇರುವ ಜಾಗದಲ್ಲಿ ಹೆಚ್ಚು ಉತ್ಪಾದನೆ ಮಾಡಲು ಅನುಕೂಲವಾಗುವಂತೆ ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ನಬಾರ್ಡ್ ಬ್ಯಾಂಕ್‌ನ ವ್ಯವಸ್ಥಾಪಕಿ ಅನುರಾಧಾ ನರಹರಿ, ಡಿ.ಸಿ.ಸಿ. ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ರಾಮಲಿಂಗಂ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News