×
Ad

ಮದ್ಯವ್ಯಸನ ವಿರುದ್ಧ ಮಕ್ಕಳ ಸೈನ್ಯ

Update: 2016-12-21 18:52 IST

ಉಡುಪಿ, ಡಿ.21: ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಯ ಆಶ್ರಯದಲ್ಲಿ ‘ಮದ್ಯವ್ಯಸನ ವಿರುದ್ದ ಮಕ್ಕಳ ಸೈನ್ಯ’ ಇವರ ಮಾಸಿಕ ಸಭೆ ಡಿ.24ರ ಶನಿವಾರ ಅಪರಾಹ್ನ 2:00ಕ್ಕೆ ಆಸ್ಪತ್ರೆಯ ಕಮಲ್ ಎ. ಬಾಳಿಗ ಸಭಾಂಗಣದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಮಕ್ಕಳ ಸೃಜನಶೀಲತೆಗೆ ಪೂರಕವಾಗಿರುವ ವೈವಿದ್ಯಮಯ ಚಟುವಟಿಕೆಯಾಧಾರಿತ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಯರಾಜ್ ಫ್ರಾಂಕ್ಲಿನ್ (ಬಾನುಲಿ ಅಣ್ಣಯ್ಯ) ಅವರು ಏಕಾಗ್ರತೆ ಹೆಚ್ಚಿಸುವ ಆಟಗಳು ಹಾಗೂ ಕ್ರಿಸ್ಮಸ್ ವಿಶೇಷತೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ, ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರುಮನೆ ಹಾಗೂ ಸೌಜನ್ಯ ಶೆಟ್ಟಿ ಉಪಸ್ಥಿತರಿರುವರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News