×
Ad

ಡಿ.24-25: ವಿಟ್ಲ ಜೋಷಿ ಜನ್ಮ ಶತಮಾನೋತ್ಸವ ಸರಣಿ ಕಾರ್ಯಕ್ರಮದ ಸಮಾರೋಪ

Update: 2016-12-21 19:54 IST

ಉಡುಪಿ, ಡಿ.21: ಉಡುಪಿ ಪರ್ಯಾಯ ಪೇಜಾವರ ಮಠದ ಆಶ್ರಯ ದಲ್ಲಿ ‘ರಸಿಕ ರತ್ನ’ ವಿಟ್ಲ ಜೋಷಿ ಪ್ರತಿಷ್ಠಾನ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಸಹಯೋಗದೊಂದಿಗೆ ‘ರಸಿಕರತ್ನ’ ವಿಟ್ಲ ಜೋಷಿ ಜನ್ಮ ಶತಮಾ ನೋತ್ಸವ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಡಿ.24 ಮತ್ತು 25ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.

ಸಮಾರಂಭವನ್ನು 24ರಂದು ಸಂಜೆ 6:30ಕ್ಕೆ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸಲಿರುವರು. ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಲ್ಲೂರು ಶಿವರಾಮ ಶೆಟ್ಟಿ ಅವರ ‘ಪಥದೀಪಿಕಾ ಮತ್ತು ಹೊಂಗಿರಣ’ ಪುಸ್ತಕ ಬಿಡುಗಡೆ ಮಾಡಲಿರುವರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ವೀಣಾ ವಾದನ ಮತ್ತು ‘ಚಂದ್ರಾವಳಿ ವಿಲಾಸ’ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಹರೀಶ್ ಜೋಶಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

 25ರಂದು ಬೆಳಗ್ಗೆ 9:30ಕ್ಕೆ ನಡೆಯುವ ವೃತ್ತಿಯಲ್ಲಿ ಹಾಸ್ಯ ಕಾರ್ಯಕ್ರಮ ವನ್ನು ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ. 11:30ಕ್ಕೆ ಯಕ್ಷ ಗಾನ ಕಲಾವಿದರಾದ ಗೋವಿಂದ ಭಟ್, ಕೋಳ್ಯೂರು ರಾಮಚಂದ್ರ ರಾವ್, ಜಯಕುಮಾರ್ ಉದ್ಯಾವರ, ಮುಖ್ಯಪ್ರಾಣ ಕಿನ್ನಿಗೋಳಿ, ನಿವೃತ್ತ ಪ್ರಾಂಶು ಪಾಲ ವಾಸುದೇವ ರಾವ್ ಅವರಿಗೆ ಜೋಶಿ ಶತಮಾನೋತ್ಸವದ ಗೌರವ ಸನ್ಮಾನ ಮಾಡಲಾಗುವುದು. ಮಧ್ಯಾಹ್ನ 1ಗಂಟೆಯಿಂದ ಹಾಸ್ಯ ಪಾತ್ರಗಳ ಮುಖವರ್ಣಿಕೆ- ಪ್ರಾತ್ಯಕ್ಷಿಕೆ, 2 ಗಂಟೆಯಿಂದ ‘ಬಪ್ಪನಾಡು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಪ್ರತಿಷ್ಠಾನ ಕಾರ್ಯದರ್ಶಿ ಶಿಲ್ಪಾ ಜೋಶಿ ಉಪಸ್ಥಿತರಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News