×
Ad

ತುರವೇಯಿಂದ ಕ್ರಿಸ್ಮಸ್ ಸೌಹಾರ್ದ ಸಂಗಮ

Update: 2016-12-21 21:29 IST

ಮಂಗಳೂರು, ಡಿ.21: ತುಳುನಾಡ ರಕ್ಷಣಾ ವೇದಿಕೆ ಮತ್ತು ಪೋರ್ಟ್ ವಾರ್ಡ್ ಫ್ರೆಂಡ್ಸ್‌ನ ಜಂಟಿ ಆಶ್ರಯದಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಿಸ್ಮಸ್ ಸೌಹಾರ್ದ ಸಂಗಮ ಬುಧವಾರ ನಡೆಯಿತು.

ಕೇಮಾರು ಕ್ಷೇತ್ರದ ಈಶ ವಿಠಲದಾಸ ಸ್ವಾಮೀಜಿ, ಶಾಂತಿಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ರೊಜಾರಿಯೊ ಚರ್ಚ್‌ನ ಧರ್ಮಗುರು ರೆ.ಫಾ. ಜೆ.ಬಿ.ಕ್ರಾಸ್ತ ಆಶೀರ್ವಚನ ನೀಡಿದರು.

ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿದರು. ತುರವೇ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕಾರ್ಪೊರೇಟರ್‌ಗಳಾದ ಲತೀಫ್ ಕಂದುಕ, ದಿವಾಕರ ಪಾಂಡೇಶ್ವರ, ಕೇಂದ್ರ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಬದ್ರಿಯಾ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಇಸ್ಮಾಯೀಲ್, ಇನ್‌ಸ್ಪೆಕ್ಟರ್ ಬೆಳ್ಳಿಯಪ್ಪ, ದಲಿತ ಸಂಘಟನೆಯ ಮುಖಂಡ ಪಿ.ಕೇಶವ ಮತ್ತಿತರರು ಭಾಗವಹಿಸಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News