ಗುಜರಾತಿ, ಅಸ್ಸಾಮಿ, ತಮಿಳು ಸೇರಿದಂತೆ 8 ಭಾಷೆಗಳಲ್ಲಿ ‘ನೀಟ್’ ಪರೀಕ್ಷೆ
ಹೊಸದಿಲ್ಲಿ, ಡಿ.21:ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯನ್ನು 2017-18ರಿಂದ 8 ಭಾಷೆಗಳಲ್ಲಿ ನಡೆಸಲಾಗುತ್ತದೆ.
ಹಿಂದಿ, ಇಂಗ್ಲಿಷ್, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ತಮಿಳು ಮತ್ತು ತೆಲುಗು- ಈ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ನೀಟ್‌ಗೆ ಅರ್ಹತೆ ಪಡೆಯುವ ಅಭ್ಯರ್ಥಿ ರಾಜ್ಯ ಸರಕಾರ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅಖಿಲ ಭಾರತ ಕೋಟಾದಡಿ ಮತ್ತು ಇತರ ಕೋಟಾದಡಿ ಪ್ರವೇಶ ಪಡೆಯಲು ಅರ್ಹನಾಗುತ್ತಾನೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳ ಆರೋಗ್ಯ ಇಲಾಖೆಗಳ ಸಹಯೋಗದಿಂದ ನಡೆಸಿದ ಪ್ರಯತ್ನಗಳ ಬಳಿಕ , ರಾಜ್ಯದ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಾನತೆ ಕಲ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಪರೀಕ್ಷೆ ವಿಭಾಗದ ಜಂಟಿ ಕಾರ್ಯದರ್ಶಿ ಎ.ಕೆ.ಸಿಂಘಲ್ ತಿಳಿಸಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.