ಬೈಕ್ ಅಪಘಾತ: ಸವಾರ ಮೃತ್ಯು
Update: 2016-12-21 22:13 IST
ಬ್ರಹ್ಮಾವರ, ಡಿ.21: ಸಾಯಿಬರಕಟ್ಟೆಯ ಯಡ್ತಾಡಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗುವ ತಿರುವಿನಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೈಕ್ ಸವಾರ ಅಕ್ಷಯ್(19) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ವಿಜೇತ್(20) ಎಂಬವರು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿರಿಯಾರ ಕಡೆ ಹೋಗುತ್ತಿದ್ದ ಬೈಕ್, ತಿರುವಿನಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಬೈಕ್ ಸವಾರರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಅಕ್ಷಯ್ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.