×
Ad

ಪ್ರವೀಣ್ ಕುಲಾಲ್ ಕೊಲೆ: ನಾಳೆ ಆರೋಪಿಗಳು ಕೋರ್ಟಿಗೆ ಹಾಜರು

Update: 2016-12-21 22:19 IST

ಹಿರಿಯಡ್ಕ, ಡಿ.21: ರೌಡಿ ವರ್ವಾಡಿ ಪ್ರವೀಣ್ ಕುಲಾಲ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ನಾಳೆ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿ ಚೇತರಿಸಿಕೊಂಡ ಪುತ್ತಿಗೆ ಸಂತೋಷ ಹಾಗೂ ನಿನ್ನೆ ಬಂಧಿಸಲ್ಪಟ್ಟ ಮಾಂಬೆಟ್ಟು ಸಂತೋಷ್‌ನನ್ನು ಪ್ರಕರಣ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್ ಉಡುಪಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಲತೇಶ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಈ ಹತ್ಯೆಗೆ ಯೋಜನೆ ರೂಪಿಸಿದ ಪ್ರಮುಖ ಆರೋಪಿ ಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News