ಕುಳಾಯಿ: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿ ಮೃತ್ಯು

Update: 2016-12-22 05:06 GMT

ಸುರತ್ಕಲ್, ಡಿ.22: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಕುಳಾಯಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
 ಮೃತರನ್ನು ಕುಳಾಯಿ ನಿವಾಸಿ ಮಹಾಬಲೇಶ್ವರ ಎಂದು ಗುರುತಿಸಲಾಗಿದೆ. ಇವರಿಂದು ಕುಳಾಯಿಯ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯಾವುದೊ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಮಹಾಬಲೇಶ್ವರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News