ಮತ್ಸ್ಯ ಸಂಪತ್ತು ಸಂರಕ್ಷಣೆಗೆ ನೂತನ ನೀತಿ: ಪ್ರಮೋದ್ ಮಧ್ವರಾಜ್
ಕುಂದಾಪುರ, ಡಿ.22: ಬಂದರುಗಳ ಮತ್ತು ಮೀನುಗಾರರ ಅಭಿವೃದ್ಧಿಯ ಜೊತೆಗೆ ಮತ್ಸ್ಯ ಸಂಪತ್ತಿನ ಸಂರಕ್ಷಣೆಯ ಹೊಣೆಯೂ ನಮ್ಮ ಮೇಲಿದೆ. ಆದು ದರಿಂದ ಮೀನುಗಾರಿಕಾ ನೀತಿಯನ್ನು ರಚಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ 102.11 ಕೋಟಿ ರೂ. ವೆಚ್ಚದಲ್ಲಿ ಬ್ರೇಕ್‌ವಾಟರ್ ವಿಸ್ತರಣಾ ಕಾಮಗಾರಿಗೆ ಗುರುವಾರ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು.
ಮೀನು ಕ್ಷಾಮವನ್ನು ತಡೆಯಲು ಹಾಗೂ ಹೇರಳ ಮತ್ಸ್ಯ ಸಂಪತ್ತು ಲಭಿಸಲು ಪೂರಕವಾಗಿ ಸಮಗ್ರ ನೀತಿಯೊಂದನ್ನು ಜಾರಿಗೆ ತರಲು ಎಲ್ಲ ರಾಜ್ಯಗಳ ಮೀನುಗಾರಿಕೆಗೆ ಸಂಬಂಧಿಸಿದ ಮಂತ್ರಿಗಳು ಹಾಗೂ ಅಧಿಕಾರಿಗಳ ಶೃಂಗ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಮೀನುಗಾರರ ಎಲ್ಲ ಸಮಸ್ಯೆಗಳಿಗೆ ರಾಜ್ಯ ಸರಕಾರ ಈಗಾಗಲೇ ಸ್ಪಂದಿ ಸಿದ್ದು, ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಮತ್ತು ಬೇಡಿಕೆ ಅರ್ಜಿ ಸಲ್ಲಿಸಿದ ಎಲ್ಲ ಮೀನುಗಾರರಿಗೆ ಸಾಧ್ಯತಾ ಪ್ರಮಾಣಪತ್ರವನ್ನು ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಶಂಕುಸ್ಥಾಪನೆಗೊಂಡ ಮೇಲಿನ ಕಾಮಗಾರಿಗೆ ಪ್ರಥಮ ಹಂತವಾಗಿ ನಾಲ್ಕು ಕೋಟಿ ರೂ. ಒಂದು ವಾರದೊಳಗೆ ಬಿಡುಗಡೆ ಮಾಡಲಾಗುವುದು. ಮಡಿಕಲ್ ಬಂದರು ಅಭಿವೃದ್ಧಿಗೆ ಹೊಸ ಯೋಜನಾ ವರದಿಯನ್ನು ಕ್ಯಾಬಿನೆಟ್‌ನಲ್ಲಿ ಮಂಡಿಸಿ ಅನುಮೋದನೆಗೆ ಯತ್ನಿಸಲಾಗು ವುದು ಎಂದು ಅವರು ತಿಳಿಸಿದರು.
ಬೈಂದೂರು ಶಾಸಕ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮೀನು ಗಾರರ ಮುಖಂಡರಾದ ನಾಗಾ ಖಾರ್ವಿ, ಮಂಜು ಬಿಲ್ಲವ, ಪುರು ಷೋತ್ತಮ ಆರ್ಕಾಟ್, ರಮೇಶ್ ಕುಂದರ್, ಮೀನುಗಾರಿಕೆ ಇಲಾಖೆ ನಿರ್ದೇಶಕ ಎಚ್.ಎಸ್.ವೀರಪ್ಪಗೌಡ, ಜಂಟಿ ನಿರ್ದೇಶಕ ಗಣಪತಿ ಭಟ್, ಉಪನಿರ್ದೇಶಕ ಮಹೇಶ್ ಕುಮಾರ್, ಹಿರಿಯ ಸಹಾಯಕ ನಿರ್ದೇಶಕ ಪಾರ್ಶ್ವನಾಥ್, ಸಹಾಯಕ ನಿರ್ದೇಶಕಿ ಅಂಜನಾದೇವಿ ಮೊದಲಾದವರು ಉಪಸ್ಥಿತರಿದ್ದರು.