ಅಡ್ಯಾರ್: ಬೈಕ್ ಢಿಕ್ಕಿಯಾಗಿ ವೃದ್ಧೆ ಮೃತ್ಯು
Update: 2016-12-22 22:20 IST
ಮಂಗಳೂರು, ಡಿ.22: ರಾ.ಹೆ. 75ರ ಅಡ್ಯಾರ್ ಬಳಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವೃದ್ಧೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಬಾಗಲಕೋಟೆ ಮೂಲದ ಸಿದ್ಧಮ್ಮ (60) ಮೃತಪಟ್ಟ ವೃದ್ಧೆ. ಇವರು ಕೂಲಿ ಅರಸಿಕೊಂಡು ಮಂಗಳೂರಿಗೆ ಬಂದಿದ್ದರು. ಬುಧವಾರ ಸಂಜೆ ಅಡ್ಯಾರ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಸಿದ್ದಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.