ಉಡುಪಿ : ವಿಶ್ವ ಮಾನವ ದಿನಾಚರಣೆ ಪೂರ್ವಭಾವಿ ಸಭೆ

Update: 2016-12-23 13:41 GMT

ಉಡುಪಿ, ಡಿ.23: ಜ್ಞಾನಪೀಠ ಪ್ರಶಸ್ತಿ ವಿಜೇತ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವಾದ ಡಿ.29ನ್ನು ಇದೇ ಪ್ರಥಮ ಬಾರಿಗೆ ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಉಡುಪಿಯ ಅಪರ ಜಿಲ್ಲಾಧಿಕಾರಿ ಅನುರಾಧ ತಿಳಿಸಿದ್ದಾರೆ.

 ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶ್ವ ಮಾನವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

 ಈ ಪ್ರಯುಕ್ತ ಡಿ.29ರಂದು ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿದ ಅವರು, ಕುವೆಂಪು ಅವರ ರಚನೆಯ ಗೀತೆಗಳ ಗಾಯನ, ಉಪನ್ಯಾಸ ಕಾರ್ಯಕ್ರಮ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಉಡುಪಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಎಲ್ಲ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸುವಂತೆ ಅನುರಾಧ ಸೂಚಿಸಿದರು.

ಸಭೆಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News