ಬಸ್ ಢಿಕ್ಕಿ: ಬೈಕ್ ಸವಾರ ಸಾವು
Update: 2016-12-23 22:52 IST
ಶಿವಮೊಗ್ಗ, ಡಿ. 23: ವೇಗವಾಗಿ ಆಗಮಿಸಿದ ಬಸ್‌ವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಗರದ ಹೊರವಲಯ ಪಿಳ್ಳಂಗೆರೆ ಗ್ರಾಮದ ಎನ್‌ಎಚ್. 13ರಲ್ಲಿ ವರದಿಯಾಗಿದೆ. ಭದ್ರಾವತಿ ತಾಲೂಕು ಕನಸಿನಕಟ್ಟೆ ಗ್ರಾಮದ ಕೂಲಿ ಕಾರ್ಮಿಕ ಆಂಜನೇಯ (30) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾಗ ಎದುರಿನಿಂದ ಆಗಮಿಸಿದ ಪ್ರಯಾಣಿಕ ಬಸ್ ಬೈಕ್‌ಗೆ ಢಿಕ್ಕಿಯಾಗಿ ಬಸ್ ಚಾಲಕ ವಾಹನ ನಿಲ್ಲಿಸದೆ ತೆರಳಿದ್ದಾನೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿದ್ದು, ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.