×
Ad

ಅಕ್ರಮ ಮರಳು ಗಣಿಗಾರಿಕೆ: 9 ಟ್ರ್ಯಾಕ್ಟರ್, 1 ಜೆಸಿಬಿ ವಶ

Update: 2016-12-23 23:01 IST

ಶಿವಮೊಗ್ಗ, ಡಿ.23: ತುಂಗಭದ್ರಾ ನದಿಯಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಬಯಲಿಗೆಳೆದಿರುವ ಗಣಿ ಮತ್ತು ಭೂ ವಿಜ್ಞ್ಞಾನ ಇಲಾಖೆಯ ಅಧಿಕಾರಿಗಳ ತಂಡವು 9 ಟ್ರ್ಯಾಕ್ಟರ್ ಹಾಗೂ 1 ಜೆಸಿಬಿ ವಶಕ್ಕೆ ಪಡೆದುಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ವರದಿಯಾಗಿದೆ. ಖಚಿತ ವರ್ತಮಾನದ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಎಂ.ಎನ್.ವಿಂಧ್ಯ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ಈ ವೇಳೆ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳೆಲ್ಲರೂ ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ನದಿ ಪಾತ್ರದಲ್ಲಿ ಭಾರೀ ಪ್ರಮಾಣದ ಮರಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅವ್ಯಾಹತ: ಇತ್ತೀಚೆಗೆ ಬುಳ್ಳಾಪುರ ಸುತ್ತಮುತ್ತಲು ಕಾನೂನುಬಾಹಿರ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತಂತೆ ವ್ಯಾಪಕ ದೂರುಗಳು ಕೇಳಿಬಂದಿದ್ದವು.

ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಎಂ.ಎನ್. ವಿಂದ್ಯರವರು ಕಾರ್ಯೋನ್ಮುಖರಾಗುವ ಮೂಲಕ ದಂಧೆಕೋರರ ನಿದ್ದೆಗೆಡುವಂತೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News