×
Ad

ಅಕ್ರಮ ಬೋರ್‌ವೆಲ್ ಕೊರೆದರೆ ಕ್ರಿಮಿನಲ್ ಕೇಸ್: ಡಿಸಿ ಸೂಚನೆ

Update: 2016-12-24 21:23 IST

 ಮಂಗಳೂರು, ಡಿ.24: ಅಂತರ್ಜಾಲ ಮಟ್ಟದ ಕುಸಿತದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದನ್ನು ನಿವಾರಿಸಲು ಹಾಗೂ ಮುಂದಿನ ದಿನಗಳಲ್ಲಿ ಉಂಟಾಗುವ ನೀರಿನ ಸಮಸ್ಯೆಗಳ ನಿವಾರಣೆಗಾಗಿ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದನ್ನು ನಿಷೇಧಿಸಿ ಸರಕಾರ ಆದೇಶಿಸಿದೆ.
   
  ಆದರೆ ಸರಕಾರದ ವಿವಿಧ ಇಲಾಖೆ, ನಿಗಮ, ಸಂಸ್ಥೆಗಳಿಂದ ಅನುಮೋದನೆಗೊಂಡ ಕುಡಿಯುವ ನೀರಿನ ಉದ್ದೇಶದ ಕಾಮಗಾರಿಗಳಿಗಾಗಿ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಈ ಆದೇಶದಿಂದ ವಿನಾಯಿತಿ ನೀಡಿ ಅನುಮತಿ ನೀಡಲಾಗಿದೆ.

ಹೊಸ ಕೊಳವೆ ಬಾವಿಗಳನ್ನು ಕೊರೆಯುವುದನ್ನು ನಿಷೇಧಿಸಿ ಆದೇಶ ಮಾಡಿದ್ದರೂ ಕೂಡಾ ಆದೇಶ ಉಲ್ಲಂಘಿಸಿ ಕೊಳವೆ ಬಾವಿ ಕೊರೆಯುವ ಪ್ರಕರಣಗಳು ಕಂಡು ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬರುತ್ತಿವೆ.

ಸರಕಾರಿ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ಹಾಗೂ ಪಾಲಿಸದಿದ್ದಲ್ಲಿ ಅಂತಹವರ ವಿರುದ್ಧ ಐಪಿಸಿ ಕಲಂಗಳಡಿ ಕ್ರಮ ಕೈಗೊಳ್ಳಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸರಕಾರ ಆದೇಶವನ್ನು ಉಲ್ಲಂಘಿಸಿ, ಅಕ್ರಮ ಕೊಳವೆ ಬಾವಿ ಕೊರೆಯುತ್ತಿರುವವರ ವಿರುದ್ಧ ಐಪಿಸಿ ಅಧಿನಿಯಮದಂತೆ ಸೂಕತಿ ಪ್ರಕರಣ ದಾಖಲಿಸಬೇಕು. ಅಕ್ರಮ ಕೊಳವೆ ಬಾ ಕೊರೆಯುತಿತಿರುವ ಏಜೆನ್ಸಿ ರುದ್ಧವೂ ಸೂಕತಿ ಪ್ರಕರಣ ದಾಖಲಿಸಿ, ಸಲಕರಣೆಗಳನ್ನು ಜಪ್ತಿ ಮಾಡಿ, ಸಂಬಂಧಿಸಿದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ ಜಗದೀಶ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News