ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರ ಭೇಟಿ
ಉಡುಪಿ, ಡಿ.24: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಎಂ.ಎ.ಗಫೂರ್ ಉಡುಪಿಯ ಪರ್ಯಾಯ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಬೇಟಿ ಮಾಡಿ ಆಶೀರ್ವಚನ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಜಿಲ್ಲೆಯಲ್ಲಿ ಅಧಿಕ ಸಂಖ್ಯೆ ಯಲ್ಲಿ ಮುಸ್ಲಿಂ ಕುಟುಂಬಗಳು, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿ ರುವುದರಿಂದ ಅವರಿಗೆ ಕಾಳಜಿ ವಹಿಸಿ ಹೆಚ್ಚಿನ ಸೌಲ್ಯ ನೀಡುವಂತೆ ಅಧ್ಯಕ್ಷರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ನಂತರ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ.ವಂ. ಡಾ. ಜೆರಾಲ್ಡ್ ಐಸಾಕ್ ಲೋಬೋ ಇವರನ್ನು ಬಿಷಪ್ ಹೌಸ್ ಉಡುಪಿ ಭೇಟಿ ಮಾಡಿದರು.
ಈ ಸಂದರ್ದಲ್ಲಿ ಧರ್ಮಾಧ್ಯಕ್ಷರಿಗೆ ಕ್ರಿಶ್ಚಿಯನ್ ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಸೌಲ್ಯಗಳ ಬಗ್ಗೆ ಮಾಹಿತಿ ನೀಡಿ ಅವರಿಂದ ಅಮೂಲ್ಯ ಸಲಹೆಗಳನ್ನು ಪಡೆದರು.
ಉಡುಪಿ ಜಾಮೀಯಾ ಮಸೀದಿಗೆ ಬೇಟಿ ನೀಡಿ ಅಲ್ಲಿನ ವೌಲಾನಾರ ಪ್ರಬೋಧನೆ ಪಡೆದು ಸಮಿತಿ ಸದಸ್ಯರನ್ನು ಉದ್ದೇಶಿಸಿ ನಿಗಮದ ವಿವಿಧ ಯೋಜನೆಗಳ ಬಗ್ಗೆ ಅನುಷ್ಟಾನದ ಮಾಹಿತಿ ಹಾಗೂ ಮುಂದಿನ ವರ್ಷದಲ್ಲಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಿ ಕಾರ್ಯರೂಪಕ್ಕೆ ತರಲಾಗುವುದೆಂದು ಭರವಸೆ ನೀಡಿದರು.