ಮಣ್ಣಪಳ್ಳವನ್ನು ಪಿಲಿಕುಳ ಮಾದರಿಯಲ್ಲಿ ಅಭಿವೃದ್ಧಿಪಡಿಸಿ: ಪ್ರಮೋದ್
ಉಡುಪಿ, ಡಿ.24: ಮಣಿಪಾಲದ ಮಣ್ಣಪಳ್ಳ ಕೆರೆಯನ್ನು ಪಿಲಿಕುಳ ಮಾದರಿ ಯಲ್ಲಿ ಜನಾಕರ್ಷಣೆಯ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಶನಿವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಶನಿವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಮಣ್ಣಪಳ್ಳದ 99 ಎಕರೆ ಪ್ರದೇಶದಲ್ಲಿ ಅಕ್ವೇರಿಯಂ, ಚಿಟ್ಟೆಪಾಕ್‌ರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನಾಕರ್ಷಣೆಯ ಕೇಂದ್ರ ವನ್ನಾಗಿ ಮಾಡುವಂತೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಮಣ್ಣಪಳ್ಳ ಸಮೀಪ ಕ್ರೀಡಾ ಇಲಾಖೆಗೆ ಮೀಸಲಿಟ್ಟಿರುವ 2.5 ಎಕರೆ ಜಾಗದಲ್ಲಿ ಸಾಹಸ ಕ್ರೀಡೆಗಳಿಗೆ ಅಗತ್ಯವಾದ ಕೇಂದ್ರ ತೆರೆಯುವ ಚಿಂತನೆ ಇದ್ದು, ಅಭಿವೃದ್ಧಿಯ ಹೆಸರಿನಲ್ಲಿ ಇಲ್ಲಿನ ಯಾವುದೇ ಗಿಡ ಕಡಿಯದಂತೆ ಸೂಚಿಸಿದರು.
ಈ ಕೆರೆಯ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ತಮಗೆ ಅನುಮತಿ ನೀಡಿದ ಕಾರ್ಯಗಳನ್ನು ಹೊರತುಪಡಿಸಿ, ಯಾವುದೇ ಹೊಸ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮುಂಚೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ನೀಡಿ, ಅನುಮತಿ ಪಡೆದ ನಂತರವೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಪ್ರಸ್ತುತ ಬೋಟಿಂಗ್ ಪಾಯಿಂಟ್ ಬಳಿ ನಿರ್ಮಿಸಿರುವ ಕ್ಯಾಂಟೀನ್‌ನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಹಾಗೂ ಕೆರೆಯ ಸುತ್ತ ಬೆಳೆದಿರುವ ಹುಲ್ಲನ್ನು ಕಟಾವು ಮಾಡಿಸುವಂತೆ, ಅಗತ್ಯವಿರುವೆಡೆ ಗೇಟು ಅಳವಡಿಕೆಗೆ ಸೂಚಿಸಿದ ಸಚಿವರು, ಮಣ್ಣಪಳ್ಳ ಅಭಿವೃದ್ಧಿಗೆ ಆದಾಯ ತರುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾದವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಮಣ್ಣಪಳ್ಳ ವ್ಯಾಪ್ತಿಯ ನಗರಸಭಾ ಸದಸ್ಯರು, ಪೌರಾಯುಕ್ತ ಮಂಜುನಾಥಯ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜನಾರ್ದನ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.