ಜೂಜಾಟ: ಓರ್ವನ ಬಂಧನ
Update: 2016-12-24 22:55 IST
ಶಿವಮೊಗ್ಗ, ಡಿ. 24: ಓ.ಸಿ. ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ವರದಿಯಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಆರೋಪಿಯಿಂದ 840 ರೂ. ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳು ದಾಸ್ತಾನು ವಶಕ್ಕೆ ಶಿವಮೊಗ್ಗ, ಡಿ. 24: ಯಾವುದೇ ಪರವಾನಿಗೆಯಿಲ್ಲದೆ ಭದ್ರಾ ನದಿಯಿಂದ ಮರಳು ತೆಗೆದು ಸಾಗಣೆ ಮಾಡುತ್ತಿದ್ದ ಪ್ರಕರಣ ಜಿಲ್ಲೆಯ ಭದ್ರಾವತಿ ತಾಲೂಕಿನ ತಡಸ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ಈ ವೇಳೆ ಮರಳು ತುಂಬುತ್ತಿದ್ದ ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳದಲ್ಲಿದ್ದ ಲಾರಿ ಹಾಗೂ ಸುಮಾರು 22 ಟ್ರಾಕ್ಟರ್ ಲೋಡ್‌ನಷ್ಟು ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.